Google

ICHARO

YEDDE PATHERA
Nama enchina Alochane Malpuvana Aven Prakrthi Korpundu

Translate

ಮುಂಬೈಯಲ್ಲಿ ಗೀತೋತ್ಸವ 2020 ಹೊರನಾಡ ಸಮ್ಮೇಳನ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ


ಮುಂಬೈಯಲ್ಲಿ ಜನವರಿ 11, 12 ರಂದು ನಡೆಯುವ ಗೀತೋತ್ಸವ 2020 ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಶ್ರೀ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು. ಎರಡು ದಿನಗಳ ಕಾರ್ಯಕ್ರಮಗಳ ರೂಪುರೇಷೆಗಳನ್ನು ನೋಡಿ ಕಾರ್ಯಕ್ರಮ ಸಂಘಟಕರನ್ನೂ ಅಭಿನಂದಿಸಿ ಶುಭ ಹಾರೈಸಿದರು.
ಕರ್ನಾಟಕ ಸುಗಮ ಸಂಗೀತ ಪರಿಷತ್ತು ಬೆಂಗಳೂರು ಇದರ ಮತ್ತು ಮಹಾರಾಷ್ಟ್ರ ಘಟಕದ ಸಂಯುಕ್ತಾಶ್ರಯದಲ್ಲಿ ಜನವರಿ 11 ಮತ್ತು 12 ರಂದು ಮುಂಬೈಯ ರಾಧಾಬಾಯಿ ಸಭಾಭವನ ಬಂಟರ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮದ ಸಮ್ಮೇಳನ ಅಧ್ಯಕ್ಷತೆಯನ್ನು ಡಾ. ಜಯಶ್ರೀ ಅರವಿಂದ ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಮಹಿಮೆಯ ಮುಖ್ಯಮಂತ್ರಿಗಳಾದ ಶ್ರೀ ಬಿಎಸ್ ಯಡಿಯೂರಪ್ಪನವರು ನೆರವೇರಿಸಲಿದ್ದಾರೆ. ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಗೀತೋತ್ಸವ 2020 ಸ್ವಾಗತ ಸಮಿತಿ ಅಧ್ಯಕ್ಷ ಡಾ. ಆರ್. ಕೆ. ಶೆಟ್ಟಿ, ಕರ್ನಾಟಕ ಜಾನಪದ ಪರಿಷತ್ ಗಡಿನಾಡ ಘಟಕದ ಅಧ್ಯಕ್ಷ ಎ. ಆರ್. ಸುಬ್ಬಯ ಕಟ್ಟೆ , ಡಾ. ರಾಜೇಶ್ ಆಳ್ವ ಬದಿಯಡ್ಕ, ಹರಿದಾಸ ಕೆಆರ್ ಜಯಾನಂದ, ಕರ್ನಾಟಕ ಸುಗಮ ಸಂಗೀತ ಪರಿಷತ್ ಮಹಾರಾಷ್ಟ್ರ ಘಟಕದ ಸಂಚಾಲಕ ಕೃಷ್ಣ ಬಿ ಶೆಟ್ಟಿ, ಗೌರವ ಸಲಹೆಗಾರರು ಭಾಸ್ಕರ್ ಸುವರ್ಣ ಸಸಿಹಿತ್ಲು, ನಿಲೇಶ್ ಶೆಟ್ಟಿಗಾರ್ ಉದ್ಯಮಿ ಮೊದಲಾದವರು ಉಪಸ್ಥಿತರಿದ್ದರು.
Share on :

SUDDI

 

Copyright © 2011 Tuluworld - All Rights Reserved